ನೂಪುರ್ ಶರ್ಮಾ ಪ್ರತಿಕೃತಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ಪ್ರಕರಣ: ಮೂವರ ಬಂಧನ

Prasthutha|

ಬೆಳಗಾವಿ: ಪ್ರವಾದಿ ಮುಹಮ್ಮದ್ ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅಣಕು ಪ್ರತಿಕೃತಿ ನಡುರಸ್ತೆಯಲ್ಲೇ ನೇಣು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮುಹಮ್ಮದ್ ಶೋಯೆಬ್, ಅಮನ್ ಮೊಕಾಶಿ, ಅರ್ಬಾಝ್ ಮೊಕಾಶಿ ಬಂಧಿತರು ಎಂದು ತಿಳಿದು ಬಂದಿದೆ.
ಇವರ ಮೇಲೆ IPC ಸೆಕ್ಷನ್ 1860(u/s – 153, 109), ಕರ್ನಾಟಕ ಓಪನ್ ಪ್ಲೇಸ್ ಡಿಸ್ಫಿಗರ್ಮೆಂಟ್ ಆಕ್ಟ್ 1951 & 1981 (U/s-3,4)ನಡಿ ಕೇಸ್ ದಾಖಲಾಗಿತ್ತು.
ಎರಡು ದಿನಗಳ ಹಿಂದೆ ಫೋರ್ಟ್ ರಸ್ತೆಯ ಪಿಂಪಲ್ ಕಟ್ಟಾ ಬಳಿ ಬೆಳಗ್ಗೆ 7 ಗಂಟೆ ಸುಮಾರಿಗೆ ನೂಪುರ್ ಶರ್ಮಾ ಪ್ರತಿಕೃತಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

Join Whatsapp