ಭಾರತದಲ್ಲಿ ಭುಗಿಲೆದ್ದ ಗಲಭೆಯ ಹೊಣೆ ನೂಪುರ್ ಅಲ್ಲ: ಗಲಭೆಗೆ ಅವರಿಬ್ಬರೇ ಕಾರಣ ಎಂದ ರಾಹುಲ್ ಗಾಂಧಿ

Prasthutha|

ನವದೆಹಲಿ: ದೇಶದಲ್ಲಿ ಭುಗಿಲೆದ್ದ ಗಲಭೆಗೆ ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸಿದ ನೂಪುರ್ ಶರ್ಮಾ ಮಾತ್ರ ಹೊಣೆಯಲ್ಲ. ಇದಕ್ಕೆ ಕಾರಣ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಾಗೂ ಆರ್ಎಸ್ಎಸ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್, ಸುಪ್ರೀಂ ಕೋರ್ಟ್ ಹೇಳಿರುವುದು ನಿಜ. ಆದರೆ ದೇಶದ ಉದ್ವಿಗ್ನ ಪರಿಸ್ಥಿತಿಗೆ ಸಂಪೂರ್ಣ ಹೊಣೆ ನೂಪುರ್ ಶರ್ಮಾ ಅಲ್ಲ. ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ದೇಶದಲ್ಲಿ ದ್ವೇಷದ ವಾತಾವರಣವನ್ನು ಸೃಷ್ಟಿಸುತ್ತಿದೆ ಎಂದು ಹೇಳಿದರು.

ಬಿಜೆಪಿ ಹಾಗೂ ಆರ್ಎಸ್ಎಸ್ ದೇಶದ ಜನರ ನಡುವೆ ವಿಭಜನೆಯನ್ನು ಸೃಷ್ಟಿಸುತ್ತಿದೆ. ಆ ಮೂಲಕ ದೇಶವನ್ನು ಆಳುವ ಕನಸು ಕಾಣುತ್ತಿದೆ ಎಂದು ಹೇಳಿದ್ದಾರೆ.

Join Whatsapp
Exit mobile version