Home ಟಾಪ್ ಸುದ್ದಿಗಳು ಕೋಲ್ಕತ್ತ ಪ್ರಕರಣದ ಬೆನ್ನಲ್ಲೇ ಉತ್ತರಾಖಂಡದಲ್ಲಿ ನರ್ಸ್ ಮೇಲೆ ಅತ್ಯಾಚಾರ, ಕೊಲೆ

ಕೋಲ್ಕತ್ತ ಪ್ರಕರಣದ ಬೆನ್ನಲ್ಲೇ ಉತ್ತರಾಖಂಡದಲ್ಲಿ ನರ್ಸ್ ಮೇಲೆ ಅತ್ಯಾಚಾರ, ಕೊಲೆ

ಡೆಹ್ರಾಡೂನ್: ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ನರ್ಸ್ ವೊಬ್ಬರನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣ ವರದಿಯಾಗಿದೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಧರ್ಮೇಂದ್ರ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ.


ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿರುವ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ನಡೆದ ಒಂದು ವಾರದಲ್ಲೇ ಈ ದುಷ್ಕೃತ್ಯ ಬೆಳಕಿಗೆ ಬಂದಿರುವುದು ಆತಂಕ ಹೆಚ್ಚಿಸಿದೆ.


ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ಹಳ್ಳಿಯವರಾದ ನರ್ಸ್, ಜುಲೈ 30ರಂದು ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದರು. ಈ ವೇಳೆ ಅವರನ್ನು ಅಡ್ಡಗಟ್ಟಿದ್ದ ಧರ್ಮೇಂದ್ರ, ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Join Whatsapp
Exit mobile version