Home ಟಾಪ್ ಸುದ್ದಿಗಳು ಮಧ್ಯಪ್ರದೇಶ | ನರ್ಸರಿ ವಿದ್ಯಾರ್ಥಿನಿಯ ಮೇಲೆ ಬಸ್ ಚಾಲಕನಿಂದ ಅತ್ಯಾಚಾರ; ಇಬ್ಬರ ಬಂಧನ

ಮಧ್ಯಪ್ರದೇಶ | ನರ್ಸರಿ ವಿದ್ಯಾರ್ಥಿನಿಯ ಮೇಲೆ ಬಸ್ ಚಾಲಕನಿಂದ ಅತ್ಯಾಚಾರ; ಇಬ್ಬರ ಬಂಧನ

ಭೋಪಾಲ್: ಮೂರುವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ವಾಹನದೊಳಗೆ ಅತ್ಯಾಚಾರವೆಸಗಿರುವ ಘಟನೆ ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್’ನಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗರದ ಪ್ರಮುಖ ಖಾಸಗಿ ಶಾಲೆಯೊಂದರಲ್ಲಿ ಕಲಿಯುತ್ತಿರುವ ಮಗು ಬಸ್’ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ. ಘಟನೆಯ ಸಂದರ್ಭದಲ್ಲಿ ಬಸ್’ನಲ್ಲಿ ಮಹಿಳಾ ಅಟೆಂಡರ್ ಜೊತೆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ಮಹಿಳಾ ಅಟೆಂಡರ್ ಅನ್ನು ಐಪಿಸಿ ಸೆಕ್ಷನ್ 376 ಬಿ ಮತ್ತು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಗುವಿನ ಘೋಷಕರು ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ ನಿಧಿ ಸಕ್ಸೇನಾ ತಿಳಿಸಿದ್ದಾರೆ.

ಶಾಲೆಯ ಆಡಳಿತ ಮಂಡಳಿ ಈ ವಿಷಯವನ್ನು ಮುಚ್ಚಿಡಲು ಪ್ತಯತ್ನಿಸುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ನರೋತ್ತಮ್ ಮಿಶ್ರಾ, ಶಾಲೆಯ ಆಡಳಿತ ಮಂಡಳಿಯ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ವರದಿಯ ಆಧಾರದಲ್ಲಿ ಕ್ರಮ ಜರುಗಿಸಲಾಗುವುದು. ಈ ವಿಚಾರದಲ್ಲಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಲಾಗಿಲ್ಲ ಎಂದು ತಿಳಿಸಿದರು.

ಈ ಮಧ್ಯೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಬಿಜೆಪಿ ಆಡಳಿತದಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಸುರಕ್ಷಿತರಾಗಿಲ್ಲ ಎಂದು ಆರೋಪಿಸಿದ ಕಾಂಗ್ರೆಸ್ ವಕ್ತಾರ ಕೆ.ಕೆ ಮಿಶ್ರಾ, ಇದರ ನೈತಿಕ ಹೊಣೆಹೊತ್ತು ಗೃಹ ಸಚಿವ ನರೋತ್ತಮ್ ಮಿಶ್ರಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

Join Whatsapp
Exit mobile version