ವಂಚನೆ ಆರೋಪ: ಇಡಿ ವಿಚಾರಣೆಗೆ ಹಾಜರಾದ ನಟಿ, ಸಂಸದೆ ನುಸ್ರತ್ ಜಹಾನ್

Prasthutha|

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಸಂಸದೆ ಹಾಗೂ ನಟಿ ನುಸ್ರತ್ ಜಹಾನ್ ವಿರುದ್ಧ ವಸತಿ ಫ್ಲಾಟ್ ಗಳ ಹೆಸರಲ್ಲಿ 28 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆಂದು ಆರೋಪ ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನುಸ್ರತ್ ಜಹಾನ್ ಅವರು ಇಂದು ಬೆಳಗ್ಗೆ ಕೋಲ್ಕತ್ತಾ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

- Advertisement -


ವರದಿಗಳ ಪ್ರಕಾರ, ಫ್ಲಾಟ್ ಗಳ ಖರೀದಿ ಮತ್ತು ಮಾರಾಟದ ಬಗ್ಗೆ ನುಸ್ರತ್ ಜಹಾನ್ ಅವರನ್ನು ಇಂದು ವಿಚಾರಣೆ ನಡೆಸಲಾಗುವುದು ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಟಿ, ಸಂಸದೆ ನುಸ್ರತ್ ಜಹಾನ್ ಗರಿಯಾಹತ್ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಈ ಸಂಸ್ಥೆಯ ನಿರ್ದೇಶಕರಲ್ಲಿ ನುಸ್ರತ್ ಜಹಾನ್ ಕೂಡ ಒಬ್ಬರು.

Join Whatsapp