ಮಕ್ಕಳು, ಗರ್ಭಿಣಿಯರಿಗೆ ನೀಡುವ ಮೊಟ್ಟೆ ಖರೀದಿಯಲ್ಲೂ ಬಿಜೆಪಿ ಸಚಿವೆಯ ಭ್ರಷ್ಟಾಚಾರ : NWF ಆಕ್ರೋಶ

Prasthutha|

ಬೆಂಗಳೂರು: ಮಾತೃಪೂರ್ಣ ಯೋಜನೆಯಡಿಯಲ್ಲಿ ಮಕ್ಕಳು ಮತ್ತು ಗರ್ಭಿಣಿಯರಿಗೆ ನೀಡಲಾಗುವ ಮೊಟ್ಟೆ ಖರೀದಿಯ ಟೆಂಡರ್ ನಲ್ಲಿ ಬಿಜೆಪಿ ಸಚಿವೆ ಶಶಿಕಲಾ ಜೊಲ್ಲೆ ನಡೆಸಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಎನ್.ಡಬ್ಲ್ಯು.ಎಫ್. ರಾಜ್ಯಾಧ್ಯಕ್ಷೆ ಝೀನತ್ ಬಂಟ್ವಾಳ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸಚಿವೆಯ ಕರ್ಮಕಾಂಡವು ಮಾಧ್ಯಮವೊಂದರ ಅಣಕು ಕಾರ್ಯಾಚರಣೆಯಲ್ಲಿ ಬಹಿರಂಗಗೊಂಡಿದೆ. ಶಶಿಕಲಾ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ, ಅದಕ್ಕಿಂತಲೂ ಮಿಗಿಲಾಗಿ ಓರ್ವ ಮಾತೃ ಹೃದಯಿಯಾಗಿ ಮಹಿಳೆಯರು, ಮಕ್ಕಳ ಆರೋಗ್ಯ ಮತ್ತು ಕಲ್ಯಾಣದ ಬಗ್ಗೆ ವಿವಿಧ ಯೋಜನೆಗಳನ್ನು ರೂಪಿಸಬೇಕಾಗಿತ್ತು. ಆದರೆ ಇದಕ್ಕೆ ಬದಲಾಗಿ ಆಕೆ ಭ್ರಷ್ಟಾಚಾರದಲ್ಲಿ ತೊಡಗಿರುವುದು ಅಮಾನವೀಯವಾಗಿದೆ. ಕೋವಿಡ್ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಕರುನಾಡ ಜನತೆ ಸರ್ಕಾರದ ಪರಿಹಾರ ಮಾರ್ಗೋಪಾಯಗಳ ನಿರೀಕ್ಷೆಯಲ್ಲಿದ್ದರೆ, ಬಿಜೆಪಿ ಸಚಿವರು ಮಾತ್ರ ಭ್ರಷ್ಟಾಚಾರಕ್ಕಾಗಿ ನಿತ್ಯ ಸುದ್ದಿಯಾಗುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಸಚಿವರು ಇಂತಹ ಹೀನ ಕೃತ್ಯದಲ್ಲಿ ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಶಶಿಕಲಾ ಜೊಲ್ಲೆ ಅವರಿಗೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಉಳಿದಿಲ್ಲ. ಈ ನಿಟ್ಟಿನಲ್ಲಿ ಕೂಡಲೇ ಅವರು ರಾಜೀನಾಮೆ ನೀಡಿ ಪದತ್ಯಾಗ ಮಾಡಬೇಕು. ಸರ್ಕಾರವೂ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆಗೆ ಗುರಿಪಡಿಸಬೇಕೆಂದು ಝೀನತ್ ಬಂಟ್ವಾಳ ಒತ್ತಾಯಿಸಿದ್ದಾರೆ

Join Whatsapp