ರಾಷ್ಟ್ರಪತಿ ದ್ರೌಪದಿ ಮುರ್ಮು ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ತೃಣಮೂಲ ಕಾಂಗ್ರೆಸ್ ಸಚಿವರ ಟೀಕೆಗೆ ವ್ಯಾಪಕ ಆಕ್ರೋಶ

Prasthutha|

ಕೊಲ್ಕತ್ತಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಣ್ಣದ ಬಗ್ಗೆ ಆಕ್ಷೇಪಾರ್ಹ ಹೇಳೀಕೆ ನೀಡಿರುವ ತೃಣಮೂಲ ಕಾಂಗ್ರೆಸ್ ನ ಸಚಿವ ಅಖಿಲ್ ಗಿರಿ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

- Advertisement -

ಅಖಿಲ್ ಗಿರಿ ಅವರು ರಾಷ್ಟ್ರಪತಿ ಅವರನ್ನು ಅವಹೇಳನ ಮಾಡಿರುವ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ನಂದಿಗ್ರಾಮದ ಕಾರ್ಯಕ್ರಮವೊಂದರಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಗಿರಿ, ಸುವೇಂದು ಅಧಿಕಾರಿ ನನ್ನನ್ನು ಚೆನ್ನಾಗಿ ಕಾಣುತ್ತಿಲ್ಲವೆಂದು ಟೀಕಿಸಿದ್ದಾರೆ. ಅವರೆಷ್ಟು ಚೆಂದ ಇದ್ದಾರೆ? ಜನ ಹೇಗೆ ಕಾಣಿಸುತ್ತಾರೆ ಎಂಬುದರ ಮೇಲೆ ಅವರ ವ್ಯಕ್ತಿತ್ವ ಅಳೆಯಬಾರದು. ನಾವು ರಾಷ್ಟ್ರಪತಿಗಳ ಹುದ್ದೆಯನ್ನು ಗೌರವಿಸುತ್ತೇವೆ. ಆದರೆ ಅವರು ಹೇಗೆ ಕಾಣುತ್ತಾರೆ?’ ಎಂದು ಕೇಳಿದ್ದರು. ಈ ವೀಡಿಯೋ ವೈರಲ್ ಆಗಿದ್ದು, ಸಚಿವರು ಈ ಮಾತು ಹೇಳುತ್ತಿದ್ದಂತೆಯೇ ಅಲ್ಲಿ ಸೇರಿದ್ದವರೆಲ್ಲ ಹಾಸ್ಯ ಮಾಡಿ ನಗುತ್ತಿರುವುದು ವೀಡಿಯೋದಲ್ಲಿ ಕಾಣಬಹುದಾಗಿದೆ.

- Advertisement -

ಈ ಕುರಿತು ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಅಲ್ಲಿನ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಮಮತಾ ಬ್ಯಾನರ್ಜಿ ಅವರ ಸಂಪುಟದ ಸಚಿವ ರಾಷ್ಟ್ರಪತಿಯವರನ್ನು ಅವಮಾನಿಸಿದ್ದಾರೆ. ಮಮತಾ ಯಾವತ್ತೂ ಬುಡಕಟ್ಟು ವಿರೋಧಿ, ಮುರ್ಮು ಅವರನ್ನು ರಾಷ್ಟ್ರಪತಿ ಹುದ್ದೆಗೆ ಬೆಂಬಲಿಸಿರಲಿಲ್ಲ. ಮಾತ್ರವಲ್ಲ ಈಗ ಈ ರೀತಿ ಅವಮಾನಿಸುತ್ತಿದ್ದಾರೆ. ನಾಚಿಕೆಗೇಡಿನ ಭಾಷಣ ಮಾಡಿದ ಸಚಿವ ಅಖಿಲ್ ಗಿರಿ ಈ ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆಗ್ರಹಿಸಿದ್ದಾರೆ.

Join Whatsapp