ಚುನಾವಣೆಗಳಲ್ಲಿ ಕಳಪೆ ಸಾಧನೆ: ನೈತಿಕ ಹೊಣೆಹೊತ್ತು ಒಡಿಶಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ​ ದಾಸ್ ರಾಜೀನಾಮೆ

Prasthutha|

- Advertisement -

ಒಡಿಶಾದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಒಡಿಶಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಭಕ್ತ ಚರಣ್ ದಾಸ್ ರಾಜೀನಾಮೆ ನೀಡಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅದ್ಭುತ ಸಾಧನೆ ಮಾಡಿತ್ತು. ರಾಜ್ಯದಲ್ಲಿ ಪಕ್ಷ 78 ಸ್ಥಾನಗಳನ್ನು ಗೆದ್ದಿದೆ. ಆಡಳಿತ ಪಕ್ಷ ಬಿಜೆಡಿ 51 ಸ್ಥಾನಗಳನ್ನು ಗೆದ್ದಿದೆ. ಇದನ್ನು ಹೊರತುಪಡಿಸಿದರೆ ಕಾಂಗ್ರೆಸ್ ಕೇವಲ 14 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು. ಇದಲ್ಲದೆ ಇತರೆ ಪಕ್ಷಗಳು ಮತ್ತು ಪಕ್ಷೇತರರು ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

- Advertisement -

ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಇಲ್ಲಿನ 21 ಲೋಕಸಭಾ ಕ್ಷೇತ್ರಗಳ ಪೈಕಿ 20ರಲ್ಲಿ ಬಿಜೆಪಿ ಗೆದ್ದಿದೆ. ಅದೇ ಸಮಯದಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕೆ ಸೀಮಿತವಾಗಿತ್ತು. ಆದರೆ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಡಿ ಖಾತೆ ತೆರೆಯಲೂ ಸಾಧ್ಯವಾಗಿಲ್ಲ.

Join Whatsapp
Exit mobile version