ಬೆಂಗಳೂರು: 230 ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿರುವ ಒಡಿಸ್ಸಾ ರೈಲು ದುರಂತದ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ಬಾಲಾ ಸೊರ್ ನಲ್ಲಿ ಸಂಭವಿಸಿರುವ ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ದುರಂತದಲ್ಲಿ ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.