ಕಟಕ್ : ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ಸಂರಕ್ಷಣಾ ಕಾಯ್ದೆ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರೊಬ್ಬರು ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಒಡಿಶಾದ ಕಟಕ್ ನಲ್ಲಿ ನಡೆದಿದೆ.
ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಕಟಕ್ ನಗರದ ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಗೋಚರಿಸುತ್ತಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಟಕ್ ವಲಯ -3 ರ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ತಪಸ್ ಚಂದ್ರ ಪ್ರಧಾನ್ ತಿಳಿಸಿದರು.
ನ್ಯಾಯಾಧೀಶರ ಪತ್ನಿ ಮತ್ತು ಮಗಳು ಮನೆಯಲ್ಲಿ ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದು, ಸಾವಿಗೆ ನಿಖರವಾದ ಕಾರಣವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.
ಅವರಿಬ್ಬರೂ ತಮ್ಮ ಕೆಲಸಗಳಲ್ಲಿ ಮಗ್ನರಾಗಿದ್ದ ಕಾರಣ ಅವರು ಹೆಚ್ಚು ಮಾತನಾಡುತ್ತಿರಲಿಲ್ಲ. ಅವರ ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ನ್ಯಾಯಾಧೀಶರ ಸಹೋದರ ಸುಬೋಧ್ ಬಿಹಾರಿ ತಿಳಿಸಿದ್ದಾರೆ.