ಒಡಿಶಾ: ಒಡಿಶಾ ಸಮಿತಿ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು, ಜಿಲ್ಲಾ, ತಾಲೂಕು ಮತ್ತು ಮಂಡಲ ಸಮಿತಿ, ವಿಭಾಗವಾರು ಸಮಿತಿ ಸೇರಿದಂತೆ ಎಲ್ಲವನ್ನೂ ವಿಸರ್ಜಿಸಲಾಗಿದೆ.
ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು (ಒಪಿಸಿಸಿ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಸರ್ಜಿಸಿದ್ದಾರೆ.
ಇತ್ತೀಚೆಗೆ ನಡೆದ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಯ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.
ನೂತನ ಡಿಸಿಸಿ ಅಧ್ಯಕ್ಷರ ನೇಮಕವಾಗುವವರೆಗೂ ಡಿಸಿಸಿ ಅಧ್ಯಕ್ಷರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.