ಒಡಿಶಾ ರೈಲ್ವೆ ದುರಂತ : ಅನಾಥರಾದ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡ ಅದಾನಿ ಗ್ರೂಪ್

Prasthutha|

ಹೊಸದಿಲ್ಲಿ: ಒಡಿಶಾದಲ್ಲಿ ನಡೆದ ಭೀಕರ ರೈಲ್ವೆ ಅಪಘಾತದ ಬಳಿಕ ಕೈಗಾರಿಕೋದ್ಯಮಿ ಗೌತಮ್ ಅದಾನಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ.

- Advertisement -

270ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ರೈಲ್ವೆ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ ವಹಿಸಿಕೊಳ್ಳುತ್ತದೆ ಎಂದು ಗೌತಮ್ ಅದಾನಿ ಭಾನುವಾರ ಘೋಷಿಸಿದ್ದಾರೆ.

ಒಡಿಶಾ ರೈಲು ಅಪಘಾತದಿಂದ ನಾವೆಲ್ಲರೂ ತೀವ್ರವಾಗಿ ಆಘಾತಕ್ಕೊಳಗಾಗಿದ್ದೇವೆ. ಈ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಅಮಾಯಕ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಅದಾನಿ ಸಮೂಹ ನಿರ್ಧರಿಸಿದೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಶಕ್ತಿಯನ್ನು ಒದಗಿಸುವುದು ಮತ್ತು ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಒದಗಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ಬಿಲಿಯನೇರ್ ಗೌತಮ್ ಅದಾನಿ ತಿಳಿಸಿದ್ದಾರೆ.

- Advertisement -

ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಹಲವಾರು ಸಾವು ನೋವುಗಳು ಸಂಭವಿಸಿತ್ತು.



Join Whatsapp