ಹೊಸದಿಲ್ಲಿ: ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೆ ಅಧಿಕಾರಿಗಳನ್ನು ಸಿಬಿಐ ಬಂಧಿಸಿರುವುದಾಗಿ ವರದಿಯಾಗಿದೆ.
ಬಂಧಿತರನ್ನು ರೈಲ್ವೆ ಉದ್ಯೋಗಿಗಳಾಗಿರುವ ಅರುಣ್ ಕುಮಾರ್ ಮಹಂತ, ಮುಹಮ್ಮದ್ ಅಮೀರ್ ಖಾನ್ ಮತ್ತು ಪಪ್ಪು ಕುಮಾ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳ ವಿರುದ್ಧ ಕೊಲೆಗೆ ಸಮನಾಗದ ನರಹತ್ಯೆ ಮತ್ತು ಸಾಕ್ಷ್ಯನಾಶದ ಆರೋಪ ಹೊರಿಸಲಾಗಿದೆ ಎಂದು ತಿಳಿದುಬಂದಿದೆ.
ಮಾನವ ಪ್ರಮಾದ ಮತ್ತು ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ರೈಲ್ವೆ ಸುರಕ್ಷತಾ ಆಯುಕ್ತರು ರೈಲ್ವೆ ಮಂಡಳಿಗೆ ವರದಿ ಸಲ್ಲಿಸಿದ್ದರು.
ಒಡಿಶಾದ ಬಹನಾಗ ಬಳಿಯ ಬಾಲಾಸೋರ್‌ನಲ್ಲಿ ನಡೆದ ಭೀಕರ ತ್ರಿವಳಿ ರೈಲು ದುರಂತವು ಸುಮಾರು 290 ಮಂದಿಯನ್ನು ಬಲಿಪಡೆದಿತ್ತು.