Home ಟಾಪ್ ಸುದ್ದಿಗಳು ಒಡಿಶಾ ರೈಲು ದುರಂತ | ಶವ ಇಟ್ಟಿದ್ದಕ್ಕೆ ಶಾಲೆಗೆ ಬರಲು ಮಕ್ಕಳು ನಿರಾಕರಣೆ: ಶಾಲೆ ನೆಲಸಮ

ಒಡಿಶಾ ರೈಲು ದುರಂತ | ಶವ ಇಟ್ಟಿದ್ದಕ್ಕೆ ಶಾಲೆಗೆ ಬರಲು ಮಕ್ಕಳು ನಿರಾಕರಣೆ: ಶಾಲೆ ನೆಲಸಮ

ಭುವನೇಶ್ವರ: ಬಾಲಸೋರ್ ರೈಲು ಅಪಘಾತದಲ್ಲಿ ಮೃತಪಟ್ಟವರ ಶವಗಳನ್ನು ಇರಿಸಲಾಗಿದ್ದ ಬಹನಾಗ್ ನ ಸರ್ಕಾರಿ ಶಾಲೆಯ ಕಟ್ಟಡವನ್ನು ಶುಕ್ರವಾರ ನೆಲಸಮ ಮಾಡಲಾಗಿದೆ.


ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಆವರಣಕ್ಕೆ ಬರಲು ಹಿಂದೇಟು ಹಾಕಿದ್ದರು. ಇದರಿಂದಾಗಿ ಶಾಲಾ ಆಡಳಿತ ಸಮಿತಿ ಹಳೆಯ ಶಾಲಾ ಕಟ್ಟಡವನ್ನು ನೆಲಸಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಶವಗಳನ್ನು ಇರಿಸಿದ್ದರಿಂದ ಹಾಗೂ ಘಟನೆಯಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಆಘಾತಕ್ಕೊಳಗಾಗಿದ್ದರು. ಅಲ್ಲದೇ ಶಾಲಾ ಕಟ್ಟಡ ಹಳೆಯದಾಗಿದೆ ಎಂದು ಸಮಿತಿ ಹೇಳಿಕೊಂಡಿದೆ.

Join Whatsapp
Exit mobile version