ಒಡಿಶಾ|ಗೂಡ್ಸ್ ರೈಲು ದುರಂತ; ಇಬ್ಬರು ಸಾವು

Prasthutha|

ಭುವನೇಶ್ವರ: ಗೂಡ್ಸ್ ರೈಲು ಹಳಿ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಒಡಿಶಾದ ಜಾಜ್‌ ಪುರ ಜಿಲ್ಲೆಯ ಕೋರಯಿ ರೈಲು ನಿಲ್ದಾಣದಲ್ಲಿ ನಡೆದಿದೆ.

- Advertisement -


ಡೊಂಗೊಪೋಸಿಯಿಂದ ಛತ್ರಪುರಕ್ಕೆ ಚಲಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿ ಪ್ಲಾಟ್‌ಫಾರ್ಮ್‌ಗೆ ಉರುಳಿ ಬಿದ್ದಿದೆ. ಪ್ರಯಾಣಿಕರು ರೈಲಿಗಾಗಿ ಪ್ಲಾಟ್‌ ಫಾರ್ಮ್‌ ನಲ್ಲಿ ಕಾಯುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.


ಅಪಘಾತ ನಡೆದ ಸ್ಥಳಕ್ಕೆ ವೈದ್ಯಕೀಯ ತಂಡವನ್ನು ರವಾನಿಸಲಾಗಿದ್ದು, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ಸೂಚಿಸಿದ್ದಾರೆ.

Join Whatsapp