ಇಂದು ಪಿಎಫ್ಐನಿಂದ SP ಕಚೇರಿ ಚಲೋ

Prasthutha|

►ರ‍್ಯಾಲಿಗೆ ಯಾವುದೇ ಅವಕಾಶವಿಲ್ಲ ಎಂದ ಶಶಿಕುಮಾರ್

- Advertisement -

ಮಂಗಳೂರು: ಉಪ್ಪಿನಂಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಪಿಎಫ್ ಐ ಸಂಘಟನೆಯ ಕಾರ್ಯಕರ್ತರ ಮೇಲೆ, ಪೊಲೀಸರು ನಡೆಸಿದ ಬರ್ಬರ ಲಾಠಿ ಚಾರ್ಜ್ ಖಂಡಿಸಿ ಡಿ.17ರಂದು ಮಧ್ಯಾಹ್ನ 3 ಗಂಟೆಗೆ ಎಸ್.ಪಿ. ಕಚೇರಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ತಿಳಿಸಿದ್ದಾರೆ.

ಮಂಗಳೂರಿನ ಕ್ಲಾಕ್ ಟವರ್ ನಿಂದ ಎಸ್ಪಿ ಕಚೇರಿವರೆಗೆ  ರ‍್ಯಾಲಿ ನಡೆಯಲಿದೆ. ತಪ್ಪಿತಸ್ಥ ಪೊಲೀಸರನ್ನು ಅಮಾನತುಗೊಳಿಸಬೇಕು. ಗಾಯಾಳುಗಳ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಅಮಾಯಕರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಈ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಡಿ.17ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಹಮ್ಮಿಕೊಂಡಿರುವ ರ‍್ಯಾಲಿಗೆ ಅನುಮತಿ ನೀಡಿಲ್ಲ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಪೊಲೀಸ್ ಇಲಾಖೆಯು  ರ್ಯಾಲಿಗೆ ಅವಕಾಶ  ಅವಕಾಶ ನಿರಾಕರಿಸಿರುವ ಹಿನ್ನೆಲೆಯಲ್ಲಿ ಕ್ಲಾಕ್ ಟವರ್ ಮುಂದೆ ಬೃಹತ್ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Join Whatsapp