ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ವಿವರ

Prasthutha|

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ನೀಡಲಾಗಿದೆ? .
ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ

ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ

- Advertisement -

ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ

ಡಾ. ಜಿ.ಪರಮೇಶ್ವರ್- ಗೃಹ

ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ

ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ

ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ

ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ

ಕೆ.ಜೆ.ಜಾರ್ಜ್‌- ಇಂಧನ

ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ

ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ

ಸತೀಶ್ ಜಾರಕಿಹೊಳಿ- ಲೋಕೋಪಯೋಗಿ

ಕೃಷ್ಣ ಬೈರೇಗೌಡ- ಕಂದಾಯ

ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್

ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ

ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು

ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ

ಚಲುವರಾಯಸ್ವಾಮಿ- ಕೃಷಿ

ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ

ರಹೀಮ್ ಖಾನ್: ಪೌರಾಡಳಿತ, ಹಜ್ ಖಾತೆ

ಸಂತೋಷ ಲಾಡ್- ಕಾರ್ಮಿಕ

ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ

ಆರ್.ಬಿ.ತಿಮ್ಮಾಪುರ- ಅಬಕಾರಿ

ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ

ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ

ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ

ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ

ಕೆ.ಎನ್.ರಾಜಣ್ಣ: ಸಹಕಾರ

ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)

ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ

ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ

ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ



Join Whatsapp