ಅಂಬೇಡ್ಕರ್‌ ಭಾವಚಿತ್ರಕ್ಕೆ ಒಪ್ಪಿಗೆ ನೀಡದ ಅಧಿಕಾರಿ: ಕ್ರಮ ಕೈಗೊಳ್ಳಲು ಬಿಎಂಆರ್‌ಸಿಎಲ್‌ ನೌಕರರ ಪ್ರತಿಭಟನೆ

Prasthutha|

ಬೆಂಗಳೂರು: ಗಣರಾಜ್ಯೋತ್ಸವದ ಸಂದರ್ಭದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರ ಇಡಲು ಒಪ್ಪಿಗೆ ನೀಡದ ಅಧಿಕಾರಿಯ ಮೇಲೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಕಾರಣಕ್ಕಾಗಿ ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಶನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ನೌಕರರು ಬೈಯಪ್ಪನಹಳ್ಳಿ ಮೆಟ್ರೊ ಡಿಪೊದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಮಹಾತ್ಮ ಗಾಂಧೀಜಿ ಭಾವಚಿತ್ರದ ಜೊತೆಗೆ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಇಡಲು ಬಿಎಂಆರ್‌ಸಿಎಲ್‌ ಎಸ್‌ಸಿ-ಎಸ್‌ಟಿ ಎಂಪ್ಲಾಯಿಸ್‌ ವೆಲ್ಫೇರ್‌ ಅಸೋಸಿಯೇಶನ್‌ ತಯಾರಿ ನಡೆಸಿತ್ತು. ಆದರೆ, ಗಾಂಧೀಜಿ ಫೋಟೊ ಸಾಕೆಂದು ತಿಳಿಸಿದ ಅಧಿಕಾರಿ ಶಂಕರ್‌, ಅಂಬೇಡ್ಕರ್ ಭಾವಚಿತ್ರವಿಡಲು ಒಪ್ಪಲಿಲ್ಲ. ತಕಾರ್ಯಕ್ರಮ ಸರಾಗವಾಗಿ ನಡೆಯಲಿ ಎಂಬ ಕಾರಣಕ್ಕೆ ಅವತ್ತು ಯಾವುದೇ ಪ್ರತಿಭಟನೆ ಮಾಡಿಲ್ಲ. ಆ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದೆವು. ಮೂರು ದಿನ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂವಿಧಾನವನ್ನು ರಚಿಸಿದವರ ಭಾವಚಿತ್ರವೇ ಸಂವಿಧಾನ ಜಾರಿಗೆ ಬಂದ ದಿನ ಬೇಡ ಎಂದಿರುವುದು ಅಂಬೇಡ್ಕರ್‌ ವಿರೋಧಿ ನಿಲುವು ಮಾತ್ರವಲ್ಲ, ಸಂವಿಧಾನದ ವಿರೋಧಿ ನಿಲುವೂ ಆಗಿದೆ. ಸರ್ಕಾರವೇ ಅಂಬೇಡ್ಕರ್‌ ಫೋಟೊ ಇಡಬೇಕು ಎಂಬ ಸುತ್ತೋಲೆ ಹೊರಡಿಸಿತ್ತು. ಬಿಎಂಆರ್‌ಸಿಎಲ್‌ ಅಧಿಕಾರಿಗಳು ನಿಯಮ ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳದೇ ಹೋದರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಸಿದ್ದಾರೆ



Join Whatsapp