ನಮ್ಮ ಸಮಾಜದ ಅಧಿಕಾರಿಗಳನ್ನು ಮೂಲೆಗುಂಪು ಮಾಡುತ್ತಿದ್ದಾರೆ: ಶಾಸಕ ಶಾಮನೂರು ಶಿವಶಂಕರಪ್ಪ

Prasthutha|

ದಾವಣಗೆರೆ: ಸರ್ಕಾರದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಹೇಳಿದ್ದು ನಿಜ. ನಮ್ಮ ಸಮಾಜದ ಅಧಿಕಾರಿಗಳಿಗೆ ತೊಂದರೆಯಾಗಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

- Advertisement -


ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗಿದೆ ಎಂದು ನೀಡಿರುವ ಹೇಳಿಕೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಶುಕ್ರವಾರ ರಾತ್ರಿ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದಾರೆ. ಹೌದು, ಆ ರೀತಿಯಾಗಿ ಹೇಳಿದ್ದು ನಿಜ. ಬೆಂಗಳೂರಿನಲ್ಲಿ ವೀರಶೈವ ಮಹಾಸಭಾದ ಕಾರ್ಯಕ್ರಮ ಇತ್ತು. ಅಲ್ಲಿ ನನಗೆ ಹಾನಗಲ್ ಕುಮಾರಸ್ವಾಮಿಗಳ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಭಾಷಣ ಮಾಡಬೇಕಾದರೆ, ಇರತಕ್ಕಂತ ಸತ್ಯ ಹೇಳಿದ್ದೇನೆ ಎಂದು ತಿಳಿಸಿದರು.

Join Whatsapp