Home ಟಾಪ್ ಸುದ್ದಿಗಳು ನಮ್ಮ ಸಮಾಜದ ಅಧಿಕಾರಿಗಳನ್ನು ಮೂಲೆಗುಂಪು ಮಾಡುತ್ತಿದ್ದಾರೆ: ಶಾಸಕ ಶಾಮನೂರು ಶಿವಶಂಕರಪ್ಪ

ನಮ್ಮ ಸಮಾಜದ ಅಧಿಕಾರಿಗಳನ್ನು ಮೂಲೆಗುಂಪು ಮಾಡುತ್ತಿದ್ದಾರೆ: ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಸರ್ಕಾರದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಹೇಳಿದ್ದು ನಿಜ. ನಮ್ಮ ಸಮಾಜದ ಅಧಿಕಾರಿಗಳಿಗೆ ತೊಂದರೆಯಾಗಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.


ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗಿದೆ ಎಂದು ನೀಡಿರುವ ಹೇಳಿಕೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಶುಕ್ರವಾರ ರಾತ್ರಿ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದಾರೆ. ಹೌದು, ಆ ರೀತಿಯಾಗಿ ಹೇಳಿದ್ದು ನಿಜ. ಬೆಂಗಳೂರಿನಲ್ಲಿ ವೀರಶೈವ ಮಹಾಸಭಾದ ಕಾರ್ಯಕ್ರಮ ಇತ್ತು. ಅಲ್ಲಿ ನನಗೆ ಹಾನಗಲ್ ಕುಮಾರಸ್ವಾಮಿಗಳ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಭಾಷಣ ಮಾಡಬೇಕಾದರೆ, ಇರತಕ್ಕಂತ ಸತ್ಯ ಹೇಳಿದ್ದೇನೆ ಎಂದು ತಿಳಿಸಿದರು.

Join Whatsapp
Exit mobile version