ಮಾಧ್ಯಮಿಕ ಶಾಲೆಗಳ ಭೌತಿಕ ತರಗತಿಗಳ ಆರಂಭದ ಬಗ್ಗೆ ಶೀಘ್ರ ತೀರ್ಮಾನ : ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ರಾಜ್ಯದಲ್ಲಿ ಮಾಧ್ಯಮಿಕ ಶಾಲೆಗಳ ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ಶೀರ್ಘ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -

ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಲೆಗಳ ಆರಂಭ ಕುರಿತು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕೋವಿಡ್ ಸೋಂಕು ನಿಯಂತ್ರಣ ಕ್ರಮಗಳ ನಡುವೆ ಶೈಕ್ಷಣಿಕ ಚಟುವಟಿಕೆ ನಡೆಸಲಾಗುವುದು ಎಂದರು.

ಸೋಂಕು ತಡೆಗೆ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳುತ್ತಿದ್ದು, ಸಭೆ – ಸಮಾರಂಭಗಳ ಆಯೋಜನೆಗೆ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸುವುದಾಗಿ ಅವರು ಹೇಳಿದರು.

- Advertisement -

ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ಕೇಂದ್ರ ತಂಡ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯಿಂದ ಸೆಪ್ಟೆಂಬರ್ 7ರ ವರೆಗೆ ನೆರೆ ಪ್ರದೇಶಗಳಿಗೆ ಭೇಟಿ ನೀಡಲಿದೆ. 3 ವಿಭಾಗಗಳಲ್ಲಿ ಅಧ್ಯಯನ ನಡೆಸಲಿದ್ದು, ಬೆಳಗಾವಿ, ಬಾಗಲಕೋಟೆ, ಧಾರವಾಡ, ಉತ್ತರ ಕನ್ನಡ ಮತ್ತು ಹಾವೇರಿ ಜಿಲ್ಲೆಗಳಿಗೆ ಭೇಟಿ ನೀಡಿ, ಬಳಿಕ, ಕೇಂದ್ರಕ್ಕೆ ವರದಿ ಸಲ್ಲಿಸಲಿದೆ ಎಂದರು.

ಕೇಂದ್ರ ಅಧ್ಯಯನ ತಂಡದ ಜೊತೆ ರಾಜ್ಯದ ಅಧಿಕಾರಿಗಳೂ ಸಹ ಪ್ರವಾಸ ಕೈಗೊಳ್ಳಲಿದ್ದಾರೆ. ಕೇಂದ್ರದ NDRF ನಿಧಿಯಿಂದ ರಾಜ್ಯಕ್ಕೆ ಅಗತ್ಯ ನೆರವು ದೊರೆಯುವ ವಿಶ್ವಾಸವಿದೆ ಎಂದು ಹೇಳಿದರು.

Join Whatsapp