Home ಟಾಪ್ ಸುದ್ದಿಗಳು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ: 7 ಸಿಬ್ಬಂದಿ ಅಮಾನತು

ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ: 7 ಸಿಬ್ಬಂದಿ ಅಮಾನತು

ಬೆಳಗಾವಿ: ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ಏಳು ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಬುಧವಾರ ಆದೇಶ ಹೊರಡಿಸಿದ್ದಾರೆ.


ಜಿಲ್ಲಾ ಆರೋಗ್ಯಾಧಿಕಾರಿ ಕಾರು ಚಾಲಕ ಮಂಜುನಾಥ ಪಾಟೀಲ್, ಸಿಬ್ಬಂದಿ ಮಹೇಶ ಹಿರೇಮಠ, ರಮೇಶ ನಾಯಿಕ, ಸತ್ಯಪ್ಪ ತಮ್ಮನ್ನವರ, ಅನಿಲ ತಿಪ್ಪನ್ನವರ, ದೀಪಕ ಗಾವಡೆ, ಯಲ್ಲಪ್ಪ ಮುನ್ನವಳ್ಳಿ ಎಂಬವರನ್ನು ಅಮಾನತು ಮಾಡಲಾಗಿದೆ.


ಕಚೇರಿಯಲ್ಲಿ ಮದ್ಯಪಾನ ಮಾಡುವ ವೀಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ಟೀಕೆ ಕೂಡ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಡಿಎಚ್ಒ ಡಾ. ಮಹೇಶ ಕೋಣಿ ಪಾರ್ಟಿಯಲ್ಲಿ ಭಾಗಿಯಾಗಿದ್ದ 7 ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

Join Whatsapp
Exit mobile version