ಹೊಸದಿಲ್ಲಿ: ಕುಸ್ತಿ ಫೆಡರೇಶನ್ ಇಂಡಿಯಾ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ಆಗಮಿಸಿದ ಒಲಿಂಪಿಯನ್ ಬಾಕ್ಸರ್, ಕಾಂಗ್ರೆಸ್ಸಿಗ ವಿಜೇಂದರ್ ಸಿಂಗ್ ಅವರನ್ನು ವೇದಿಕೆಯಿಂದ ಕೆಳಗಿಳಿಸಿದ ಘಟನೆ ನಡೆದಿದೆ.
ಪ್ರತಿಭಟನೆಯ ಸಮಯದಲ್ಲಿ ಕುಸ್ತಿಪಟುಗಳು ಈ ವಿಷಯವನ್ನು ರಾಜಕೀಯಗೊಳಿಸಲು ಬಯಸುವುದಿಲ್ಲವಾದ್ದರಿಂದ ವೇದಿಕೆಯಿಂದ ವಿಜೇಂದರ್ ಸಿಂಗ್ ಅವರಲ್ಲಿ ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
“ಆ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕೆಂದು ನಾನು ಬಯಸುತ್ತೇನೆ, ಕುಸ್ತಿಪಟುಗಳು ಮಾಡಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಮತ್ತು ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಬಿಐ ತನಿಖೆಯಾಗಬೇಕು” ಎಂದು ವಿಜೇಂದರ್ ಸಿಂಗ್ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸ್ಥಳಕ್ಕೆ ಆಗಮಿಸಿದ್ದ ಸಿಪಿಐ (ಎಂ) ನ ನಾಯಕಿ ಬೃಂದಾ ಕಾರಟ್‌ಗೆ ವೇದಿಕೆಯಿಂದ ಕೆಳಗಿಳಿಯುವಂತೆ ಕುಸ್ತಿಪಟುಗಳು ಮನವಿ ಮಾಡಿದ್ದರು.