ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ

- Advertisement -

ಭಾರತದ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು (ಜುಲೈ 3) ಸೌಹಾರ್ದ ಭೇಟಿ ಮಾಡಿದರು. ಇದೇ ವೇಳೆ ಮುಖ್ಯಮಂತ್ರಿಗಳು ನೀರಜ್ ಚೋಪ್ರಾ ಅವರ ಕ್ಲಾಸಿಕ್ ಜಾವೆಲಿನ್ ಟೂರ್ನಿಗೆ ಶುಭ ಹಾರೈಸಿದರು.

- Advertisement -

ಜುಲೈ 5 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸ್ಪರ್ಧೆಯಲ್ಲಿ ವಿಶ್ವದ ಅನೇಕಾ ಜಾವೆಲಿನ್ ಎಸೆತಗಾರರು ಭಾಗವಹಿಸಲಿದ್ದು, ಈ ಮೂಲಕ ಭಾರತದಲ್ಲಿ ಜಾವೆಲಿನ್ ಸ್ಪರ್ಧೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವತ್ತ ನೀರಜ್ ಚೋಪ್ರಾ ಪಣ ತೊಟ್ಟಿದ್ದಾರೆ.

ಇನ್ನು ಕರ್ನಾಟಕ ಸಿಎಂ ಭೇಟಿ ವೇಳೆ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ‌ ಪರಿಷತ್ ಸದಸ್ಯ ಗೋವಿಂದರಾಜು ಕೂಡ ನೀರಜ್ ಚೋಪ್ರಾ ಅವರೊಂದಿಗೆ ಉಪಸ್ಥಿತರಿದ್ದರು.

- Advertisement -


Must Read

Related Articles