ಒಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 3 ಕೋಟಿ ರೂ. ಬಹುಮಾನ ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್

Prasthutha|

ಚೆನ್ನೈ : ಜಪಾನಿನ ಟೋಕಿಯೊದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕ ಗೆದ್ದವರಿಗೆ ಬರೋಬ್ಬರಿ ಮೂರು ಕೋಟಿ ರೂ. ಬಹುಮಾನ ನೀಡುವುದಾಗಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ ಘೋಷಿಸಿದ್ದಾರೆ. ಬೆಳ್ಳಿ ಪದಕ ಗೆದ್ದವರಿಗೆ ಎರಡು ಕೋಟಿ ರೂ. ಮತ್ತು ಕಂಚಿನ ಪದಕ ಗೆದ್ದವರಿಗೆ ಒಂದು ಕೋಟಿ ರೂ. ನೀಡಲಾಗುವುದು ಎಂದಿದ್ದಾರೆ.

- Advertisement -

ಸುಮಾರು 14 ಕ್ರೀಡಾ ವಿಭಾಗದಲ್ಲಿ 102 ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ಸ್‌ ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ಜು.23ರಿಂದ ಆ.8ರ ವರೆಗೆ ಒಲಿಂಪಿಕ್ಸ್‌ ಸ್ಪರ್ಧೆಗಳು ಆಯೋಜಿಸಲ್ಪಟ್ಟಿವೆ.

2012ರ ಒಲಿಂಪಿಕ್ಸ್‌ ನಲ್ಲಿ ಭಾರತ ಈ ಹಿಂದಿನಿದ್ದಕ್ಕಿಂತ ಹೆಚ್ಚು ಯಶಸ್ವಿ ಸಾಧನೆ ಪ್ರದರ್ಶಿಸಿದೆ. ಈ ವೇಳೆ ಆರು ಪದಕಗಳನ್ನು ಭಾರತದ ಕ್ರೀಡಾಪಟುಗಳು ಗೆದ್ದಿದ್ದರು.



Join Whatsapp