ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಇತರ ಪಕ್ಷಗಳ ಅಭ್ಯರ್ಥಿಗಳನ್ನು ಬಲವಂತದಿಂದ ಆಮಿಷವೊಡ್ಡಿ ತನ್ನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಉಮರ್ ಅಬ್ದುಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಭ್ಯರ್ಥಿಗಳನ್ನು ಬಿಜೆಪಿ ಮತ್ತು ಅಪ್ನಾ ಪಾರ್ಟಿಗೆ ಬಲವಂತವಾಗಿ ಪಕ್ಷಾಂತರ ಮಾಡಿಸಲಾಗುತ್ತಿದೆ. ನಮ್ಮ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಅಭ್ಯರ್ಥಿಯೊಬ್ಬರನ್ನೂ ಬಲವಂತವಾಗಿ ಬಿಜೆಪಿಗೆ ಸೇರ್ಪಡೆಗೊಳಿಸಲಾಗಿದೆ. ಮೊದಲು ಅಭ್ಯರ್ಥಿಯ ಸಂಬಂಧಿಕರೋರ್ವರನ್ನು ಬಂಧಿಸಲಾಯಿತು. ಬಳಿಕ ನಮ್ಮ ಅಭ್ಯರ್ಥಿಯನ್ನು ಬಿಜೆಪಿಗೆ ಬಲವಂತವಾಗಿ ಸೇರ್ಪಡೆಗೊಳಿಸಿದ ಬಳಿಕವೇ ಅವರನ್ನು ಬಿಡುಗಡೆಗೊಳಿಸಲಾಯಿತು ಎಂದು ಅವರು ಆಪಾದಿಸಿದ್ದಾರೆ.
ಬಿಜೆಪಿಯು ತನ್ನ ಬೇಳೆ ಬೇಯಿಸಿಕೊಳ್ಳಲು ಸರಕಾರದ ಎಲ್ಲಾ ಅಂಗಗಳನ್ನೂ ಬಳಸಿಕೊಳ್ಳುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವವನ್ನು ವಿರೂಪಗೊಳಿಸುತ್ತಿದೆ ಎಂದು ಉಮರ್ ಅಬ್ದುಲ್ಲಾ ಅಭಿಪ್ರಾಯ ಪಟ್ಟಿದ್ದಾರೆ.