Home ಟಾಪ್ ಸುದ್ದಿಗಳು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ.


ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಯಗಳಿಸಿದ ನಂತರ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.


ಕಾಂಗ್ರೆಸ್ ಪಕ್ಷ ಒಮರ್ ಅಬ್ದುಲ್ಲಾ ಸಂಪುಟದ ಭಾಗವಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಮನೋಜ್ ಸಿನ್ಹಾ ಅವರು ಒಮರ್ ಅಬ್ದುಲ್ಲಾ ಮತ್ತು ಅವರ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.


ಸಂಪುಟ ಸಚಿವರಾಗಿ ಸುರೇಂದ್ರ ಚೌಧರಿ, ಸಕೀನಾ, ಜಾವೇದ್ ಅಹ್ಮದ್ ರಾಣಾ, ಜಾವೇದ್ ದಾರ್, ಸತೀಶ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ.


90 ಸ್ಥಾನಗಳ ಪೈಕಿ ನ್ಯಾಷನಲ್ ಕಾನ್ಫರೆನ್ಸ್ 42 ಮತ್ತು ಕಾಂಗ್ರೆಸ್ 6 ವಿಧಾನಸಭಾ ಸ್ಥಾನಗಳನ್ನು ಗೆದ್ದಿವೆ. ಅದೇ ಸಮಯದಲ್ಲಿ ಬಿಜೆಪಿ 29 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

Join Whatsapp
Exit mobile version