ಶ್ರೀನಗರ: ಭಾರತ್ ಜೋಡೊ ಯಾತ್ರೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಉಮರ್ ಅಬ್ದುಲ್ಲಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದಾರೆ.
ಕಾಶ್ಮೀರದ ಬನಿಹಾಲ್ ಮೂಲಕ ಯಾತ್ರೆ ಸಾಗುತ್ತಿದ್ದು, ಇದೇ ವೇಳೆ ಉಮರ್ ಅಬ್ದುಲ್ಲಾ, ರಾಹುಲ್ ಜತೆ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದಿದ್ದಾರೆ.
‘ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆಯನ್ನು ಅವರ ಇಮೇಜ್ ಹೆಚ್ಚಿಸಿಕೊಳ್ಳುವುದಕ್ಕಾಗಿ ನಡೆಸುತ್ತಿಲ್ಲ. ಬದಲಿಗೆ ದೇಶದ ಪರಿಸ್ಥಿತಿಯನ್ನು ಸುಧಾರಿಸಲು ನಡೆಸಲಾಗುತ್ತಿದೆ’ ಎಂದು ಒಮರ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ ರದ್ದತಿ ಬಗ್ಗೆ ಕಾಂಗ್ರೆಸ್ ನ ನಿಲುವನ್ನು ಸ್ಪಷ್ಟಪಡಿಸುವಂತೆ ಒತ್ತಡ ಹೇರಲು ಬಯಸುವುದಿಲ್ಲ ಎಂದು ಉಮರ್ ತಿಳಿಸಿದ್ದಾರೆ.