ಭಾರತದಲ್ಲಿ ಒಮಿಕ್ರಾನ್ ಪ್ರಕರಣ ಏರಿಕೆ: ಮಾಸ್ಕ್ ನಿಯಮ ಜಾರಿಗೆ ಸಿದ್ಧತೆ !

Prasthutha|

ನವದೆಹಲಿ: ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ಜನರು ನಿಟ್ಟುಸಿರು ಬಿಡುತ್ತಿರುವಾಗಲೇ ಇದೀಗ ದೇಶದಲ್ಲಿ ಮತ್ತೊಮ್ಮೆ ಕೊರೋನಾ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದೆ. ಮಹಾರಾಷ್ಟ್ರದಲ್ಲಿ ಪ್ರಕರಣಗಳು ಶೇಕಡಾ 17.1 ರಷ್ಟು ಏರಿಕೆಯಾಗಿದೆ. ಇನ್ನು ಒಮಿಕ್ರಾನ್ ಉಪತಳಿ ಪ್ರಕರಣಗಳು ಗಣನೀಯ ಹೆಚ್ಚಳವಾಗಿದೆ. ಭಾರತದಲ್ಲಿ ಮೊದಲ ಒಮಿಕ್ರಾನ್ ಉಪತಳಿ BQ.1 ಪ್ರಕರಣ ಪತ್ತೆಯಾಗಿದೆ.

- Advertisement -

ಇನ್ನು ಈ ಆತಂಕಕಾರಿ ಬೆಳವಣಿ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ತುರ್ತು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ICMR) ನಿರ್ದೇಶಕ ರಾಜೀವ್ ಬಹ್ಲ್, ನೀತಿ ಆಯೋಗದ ಆರೋಗ್ಯ ಸದಸ್ಯ ವಿಕೆ ಪೌಲ್, ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಜಿಐ) ಅಧ್ಯಕ್ಷರು ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಆರೋಗ್ಯ ತಜ್ಞ ಅಧಿಕಾರಿಗಳು ಮಾಸ್ಕ್ ಕಡ್ಡಾಯಗೊಳಿಸಲು ಸೂಚಿಸಿದ್ದಾರೆ.

ಸದ್ಯ ಭಾರತದಲ್ಲಿ ಕೋವಿಡ್ ಹಾಗೂ ಒಮಿಕ್ರಾನ್ ಪ್ರಕರಣಗಳು ನಿಯಂತ್ರಣದಲ್ಲಿದೆ. ಆದರೆ ಏರಿಕೆ ಪ್ರಮಾಣ ಆತಂಕ ತಂದಿದೆ. ಕ್ಷಿಪ್ರ ಗತಿಯಲ್ಲಿ ಏರಿಕೆ ಕಾಣುತ್ತಿರುವ ಕಾರಣ ಮತ್ತೊಂದು ಅಪಾಯ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಈಗಲೇ ಮುನ್ನಚ್ಚೆರಿಕೆ ವಹಿಸಲು ಸಭೆ ನಡೆಸಲಾಗಿದೆ. ಇದರಿಂದ ಮುಂಬರುವ ದಿನಗಳಲ್ಲಿ ಎದುರಾವ ಅಪಾಯವನ್ನು ದೂರ ಸರಿಸಬಹುದು ಎಂದು ಅಧಿಕಾರಿಗಳು ಸೂಚಿಸಿದ್ದರೆ.

Join Whatsapp