ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪತ್ತೆಯಾದ ‘ಒಮಿಕ್ರಾನ್’
Prasthutha: December 5, 2021

ದೆಹಲಿ: ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್ ರೂಪಾಂತರಿ ಒಮಿಕ್ರಾನ್ ಸೋಂಕು ಕರ್ನಾಟಕ, ಮಹಾರಾಷ್ಟ್ರ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಒಮಿಕ್ರಾನ್ ಸೋಂಕಿನ ಸಂಖ್ಯೆ 5ಕ್ಕೆ ಏರಿಕೆ ಕಂಡಿದೆ.
ತಾಂಜಾನಿಯಾದಿಂದ ಮರಳಿ ಬಂದ ವ್ಯಕ್ತಿಯೊಬ್ಬರಲ್ಲಿ ಓಮೈಕ್ರಾನ್ ಪತ್ತೆಯಾಗಿದೆ. ಅವರನ್ನು ದೆಹಲಿಯ ಲೋಕನಾಯಕ ಜಯಪ್ರಕಾಶ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾದಲ್ಲಿರಿಸಲಾಗಿದೆ’ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಾಹಿತಿ ನೀಡಿದ್ದಾರೆ.
ಅಲ್ಲದೇ 15 ಕೋವಿಡ್ ಸೋಂಕಿತರನ್ನು ಓಮೈಕ್ರಾನ್ ಶಂಕೆಯ ಮೇಲೆ ಇದೇ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜೈನ್ ತಿಳಿಸಿದ್ದಾರೆ. ದೇಶದಲ್ಲಿ ಒಟ್ಟು 5 ಓಮೈಕ್ರಾನ್ ಪ್ರಕರಣಗಳ ಪೈಕಿ ಕರ್ನಾಟಕದಲ್ಲಿ 2, ಗುಜರಾತ್‌ನಲ್ಲಿ 1 ಹಾಗೂ ಮಹಾರಾಷ್ಟ್ರದಲ್ಲಿ 1 ಪ್ರಕರಣಗಳು ಹಾಗು ಇದೀಗ ದೆಹಲಿಯಲ್ಲಿ 1 ಪ್ರಕರಣಗಳು ವರದಿಯಾಗಿದೆ.
