Home ರಾಜ್ಯ ಓಮಿಕ್ರಾನ್ ಆತಂಕ; ಅಗತ್ಯ ಮುನ್ನೆಚ್ಚರ ವಹಿಸಿ: ಮಡಿಕೇರಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ

ಓಮಿಕ್ರಾನ್ ಆತಂಕ; ಅಗತ್ಯ ಮುನ್ನೆಚ್ಚರ ವಹಿಸಿ: ಮಡಿಕೇರಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ

ಮಡಿಕೇರಿ : ಕೋವಿಡ್ ರೂಪಾಂತರ ತಳಿ ಓಮಿಕ್ರಾನ್  ದೇಶದಲ್ಲೆ ಆತಂಕ ಸೃಷ್ಟಿಸಿರುವ ಬೆನ್ನೆಲೆ , ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ಕೊಡಗಿನ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಸಂಶೋಧನಾ ಸಂಸ್ಥೆಯ ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. 

ಓಮಿಕ್ರಾನ್ ಅಲ್ಲಲ್ಲಿ ಹರಡುತ್ತಿರುವ ಹಿನ್ನೆಲೆ ಅಗತ್ಯ ಮುನ್ನೆಚ್ಚರ ವಹಿಸಬೇಕು. ಜೊತೆಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಕೋವಿಡ್-೧೯ ಪರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಬೇಕು. ಕೋವಿಡ್-೧೯ ಪಾಸಿಟಿವ್ ಬಂದಲ್ಲಿ ತಕ್ಷಣವೇ ಆರೋಗ್ಯ ಸೇವೆ ಕಲ್ಪಿಸುವುದು, ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಉಂಟಾಗದAತೆ ಗಮನಹರಿಸುವಂತೆ ನಿರ್ದೇಶನ ನೀಡಿದರು. ೧೮ ವರ್ಷ ಮೇಲ್ಪಟ್ಟವರೆಲ್ಲರೂ ಪ್ರಥಮ ಮತ್ತು ದ್ವಿತೀಯ ಡೋಸ್ ಪಡೆಯಲು ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂನೆ ನೀಡಿದ್ರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ.ಬಿ.ಸಿ.ನವೀನ್ ಕುಮಾರ್ ಅವರು ಮಾತನಾಡಿ ಕೋವಿಡ್-೧೯ ಮೂರನೇ ಅಲೆ ಕೇಳಿಬರುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಅಗತ್ಯ ಔಷಧಿ ಹಾಗೂ ಮೂಲ ಸೌಲಭ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅವರು ಸಲಹೆ ಮಾಡಿದರು.

ಓಮೈಕ್ರಾನ್ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೊಡಗು ವೈದ್ಯಕೀಯ ವಿಜ್ಞಾನ ಸಂಶೋಧನಾ ಕೇಂದ್ರವಾಗಿರುವುದರಿAದ ಹೆಚ್ಚಿನ ಸಂಶೋಧನೆಗಳು ನಡೆಯಬೇಕು. ನರ ರೋಗ, ಕಿಡ್ನಿ, ಹೃದಯ, ಕರುಳು ಹೀಗೆ ಹಲವು ಖಾಯಿಲೆಗಳ ಸಂಬAಧ ತಜ್ಞ ವೈದ್ಯರನ್ನು ಆಹ್ವಾನಿಸಿ, ಆರೋಗ್ಯ ಸೇವೆ ಕಲ್ಪಿಸಬೇಕು. ಬಡ ಜನರು ಆಯುಷ್ಮಾನ್ ಆರೋಗ್ಯ ಕರ್ನಾಟಕ ಕಾರ್ಡ್ ಮೂಲಕ ಹೆಚ್ಚಿನ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗುತ್ತದೆ. ಜೊತೆಗೆ ಹತ್ತಿರದ ಜಿಲ್ಲೆಗಳಿಗೆ ಹೋಗುವುದು ತಪ್ಪುತ್ತದೆ ಎಂದು ಅವರು ತಿಳಿಸಿದರು.

‘ಕೊಡಗು ವೈದ್ಯಕೀಯ ಶಿಕ್ಷಣ ಸಂಸ್ಥೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಡಾ.ನವೀನ್ ಕುಮಾರ್ ಒತ್ತಿ ಹೇಳಿದರು.’

Join Whatsapp
Exit mobile version