ರಾಜ್ಯದಲ್ಲಿ ಸಾವಿರದ ಗಡಿ ದಾಟಿದ ಒಮಿಕ್ರಾನ್ ಪ್ರಕರಣ

Prasthutha|

ಬೆಂಗಳೂರು : ರಾಜ್ಯದಲ್ಲಿ ಗುರುವಾರ 185 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಇಂದು 185 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,115 ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬುಧವಾರ 48,905 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು. ಬೆಂಗಳೂರು ನಗರದಲ್ಲೇ 22,427 ಪ್ರಕರಣಗಳು ವರದಿಯಾಗಿದ್ದವು. ರಾಜ್ಯದ ಪಾಸಿಟಿವಿಟಿ ದರ 22.51% ಆಗಿದೆ ಎಂದು ತಿಳಿಸಿದ್ದಾರೆ.



Join Whatsapp