ಘಾನಾದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಓಮಿಕ್ರಾನ್ ದೃಢ

Prasthutha|

ಮಂಗಳೂರು: ಹೈರಿಸ್ಕ್ ದೇಶಗಳ ಪಟ್ಟಿಯಲ್ಲಿದ್ದ ಘಾನಾ ದಿಂದ ಆಗಮಿಸಿದ್ದ ವ್ಯಕ್ತಿಗೆ ಓಮಿಕ್ರಾನ್ ದೃಢಪಟ್ಟಿದೆ.
ಡಿ.17 ರಂದು ಘಾನಾದಿಂದ ಕುವೈಟ್ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ದಲ್ಲಿ ಬಂದಿಳಿದಿದ್ದ ವ್ಯಕ್ತಿಗೆ ರಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾಗಿತ್ತು.

- Advertisement -

ಪಾಸಿಟಿವ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಆರೋಗ್ಯ ಇಲಾಖೆ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಷನ್ ನಲ್ಲಿಟ್ಟಿತ್ತು. ವ್ಯಕ್ತಿಯ ಸ್ಯಾಂಪಲ್‌ ನ್ನು ಜಿನೊಮಿಕ್ ಸೀಕ್ವೆನ್ಸ್ ಟೆಸ್ಟ್ ಗೆ ಜಿಲ್ಲಾಡಾಳಿತ ಕಳುಹಿಸಿಕೊಟ್ಟಿತ್ತು.

ಈ ನಡುವೆ ವಿಮಾನದಲ್ಲಿದ್ದ 27 ಸಹ ಪ್ರಯಾಣಿಕರನ್ನು ಗುರುತಿಸಿದ ಆರೋಗ್ಯ ಇಲಾಖೆಯ ಅಧಿಕಾರಿಗಳು RTPCR ಟೆಸ್ಟ್ ಗೆ ಒಳಪಡಿಸಿದ್ದು, ಎಲ್ಲಾ 27 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

Join Whatsapp