ಹೊಸದಿಲ್ಲಿ: ಕೋವಿಡ್–19 ಪ್ರಕರಣಗಳು ಸಂಖ್ಯೆ ಹೆಚ್ಚಾಗುತ್ತಿದ್ದು, 24 ಗಂಟೆಗಳ ಅವಧಿಯಲ್ಲಿ 22,775 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಕೇಂದ್ರ ಸರ್ಕಾರ ತಿಳಿಸಿದೆ.
ಮನೆಯಲ್ಲಿ ಪ್ರತ್ಯೇಕವಾಗಿ ಇರುವ ರೋಗಿಗಳನ್ನು ಮೇಲ್ವಿಚಾರಣೆ ಮಾಡಲು ವಿಶೇಷ ತಂಡಗಳನ್ನು ರಚಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.
ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರೋಗ್ಯ ಮೂಲಸೌಕರ್ಯಗಳ ಸಮಯೋಚಿತ ಮತ್ತು ತ್ವರಿತ ಉನ್ನತೀಕರಣದ ಮಹತ್ವವನ್ನು ಮತ್ತೊಮ್ಮೆ ಒತ್ತಿಹೇಳುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.