ರಾಜ್ಯದಲ್ಲಿ ಒಂದೇ ದಿನ 107 ಮಂದಿಗೆ ಒಮಿಕ್ರಾನ್ ಸೋಂಕು ದೃಢ

Prasthutha|

- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರನಾ ಆತಂಕದ ನಡುವೆಯೇ ಒಮಿಕ್ರಾನ್ ಸೋಂಕಿನ ಅಬ್ಬರ ಮುಂದುವರೆದಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ 107 ಮಂದಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.

ಈ ಕುರಿತು ಮಾಹಿತಿ ನೀಡಿರುವ ಅರೋಗ್ಯ ಸಚಿವ ಡಾ.ಕೆ.ಸುಧಾಕರ್, ಜನವರಿ 6ರಂದು ಕರ್ನಾಟಕದಲ್ಲಿ 107 ಹೊಸ ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ.ಇದರಿಂದಾಗಿ ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.

- Advertisement -

ರಾಜ್ಯದಲ್ಲಿ ಮತ್ತೆ ಕೊರೋನಾ ( Coronavirus ) ಮಹಾಸ್ಪೋಟವೇ ನಿನ್ನೆ ಉಂಟಾಗಿತ್ತು. ಹೊಸದಾಗಿ 5031 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು.

Join Whatsapp