ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಇದೇ ಅ.15ರ ಶನಿವಾರ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವರು ಮಂಡೆಕೋಲು ಗ್ರಾಮದ ಅಮೃತ ಸಹಕಾರ ಸದನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗ್ರಾಮ ವಾಸ್ತವ್ಯ ಮಾಡಿ, ಸಾರ್ವಜನಿಕರಿಂದ ಕುಂದು ಕೊರತೆಗಳನ್ನು ಆಲಿಸಿ, ಬಗೆಹರಿಸಲಿದ್ದಾರೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.