Home ಕರಾವಳಿ 15 ರಂದು ಮಂಡೆಕೋಲು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

15 ರಂದು ಮಂಡೆಕೋಲು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಇದೇ ಅ.15ರ ಶನಿವಾರ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವರು ಮಂಡೆಕೋಲು ಗ್ರಾಮದ ಅಮೃತ ಸಹಕಾರ ಸದನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗ್ರಾಮ ವಾಸ್ತವ್ಯ ಮಾಡಿ, ಸಾರ್ವಜನಿಕರಿಂದ ಕುಂದು ಕೊರತೆಗಳನ್ನು ಆಲಿಸಿ, ಬಗೆಹರಿಸಲಿದ್ದಾರೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version