ಆ.1ರಂದು ಸಿಎಂ ಸಿದ್ದರಾಮಯ್ಯ ದ.ಕ ಮತ್ತು ಉಡುಪಿ ಪ್ರವಾಸ

Prasthutha|

ಮಂಗಳೂರು: ಆ.1 ರಂದು ಸಿಎಂ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

- Advertisement -

ಬೆಳಗ್ಗೆ ವಿಮಾನ ಮೂಲಕ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಉಡುಪಿಗೆ ತೆರಳಲಿದ್ದಾರೆ. ಉಡುಪಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಧ್ಯಾಹ್ನ 12.30 ರಿಂದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ3.30 ಕ್ಕೆ ಉಡುಪಿಯಿಂದ ಹೊರಟು ಸಂಜೆ4.15 ಕ್ಕೆ ದ.ಕ ಜಿಲ್ಲಾ ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ರಾತ್ರಿ 9 ಕ್ಕೆ ಮಂಗಳೂರಿನಿಂದ ವಿಮಾನ ಮೂಲಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.

Join Whatsapp