Home ಟಾಪ್ ಸುದ್ದಿಗಳು ನ. 1ರಂದು ನಟ ದಿ. ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ:...

ನ. 1ರಂದು ನಟ ದಿ. ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಬೊಮ್ಮಾಯಿ

ಬೆಂಗಳೂರು: ನವೆಂಬರ್ 1 ರಂದು ನಟ ದಿ. ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಈ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನ. ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ. ಹಲವಾರು ಶ್ರೇಷ್ಠ ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಅರ್ಥಪೂರ್ಣ ಕಾರ್ಯಕ್ರಮ ಮಾಡಲಿದ್ದೇವೆ ಎಂದರು.

Join Whatsapp
Exit mobile version