ನವದೆಹಲಿ: ಗುಜರಾತ್ ಮೂಲದ ಐಪಿಸಿ ಅಧಿಕಾರಿ ರಾಕೇಶ್ ಅಸ್ಥಾನಾ ಅವರನ್ನು ದೆಹೆಲಿ ಪೊಲೀಸ್ ಆಯುಕ್ತರಾಗಿ ನೇಮಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಇಂದು ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ನೇತೃತ್ವದ ನ್ಯಾಯಪೀಠ ಈ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ.
ಅಸ್ಥಾನಾ ಅವರನ್ನು ದೆಹಲಿ ಪೊಲೀಸ್ ಆಯುಕ್ತರಾಗಿ ನೇಮಿಸಿದ ಗೃಹ ವ್ಯವಹಾರಗಳ ಸಚಿವಾಲಯದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ದೆಹಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.