ಮಾಜಿ ಶಾಸಕ ಯು.ಆರ್ ಸಭಾಪತಿ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

Prasthutha|

ಬೆಂಗಳೂರು: ಉಡುಪಿಯ ಮಾಜಿ ಶಾಸಕ ಯು.ಆರ್ ಸಭಾಪತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

- Advertisement -

ಸಭಾಪತಿ ಅವರ ಹಠಾತ್ ನಿಧನ ಸುದ್ದಿ ಕೇಳಿ ಆಘಾತವಾಗಿದೆ. ಉಡುಪಿಯ ಹಾಗೂ ಕರಾವಳಿ ಭಾಗದ ಸಭಾಪತಿ ಅವರು ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿ ನಮ್ಮ ಜತೆ ಕೆಲಸ ಮಾಡಿದ್ದಾರೆ.

ಕರಾವಳಿ ಭಾಗದಲ್ಲಿ ಪಕ್ಷ ಸಂಘಟನೆ ಮಾಡಿದ್ದ ಸಭಾಪತಿ ಅವರು ಪಕ್ಷಕ್ಕಾಗಿ ದುಡಿದಿದ್ದರು.

- Advertisement -

ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಆತ್ಮೀಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Join Whatsapp