ಕಟ್ಟಡದ ಮೇಲಿಂದ ಬಿದ್ದ ಒಂದೂವರೆ ವರ್ಷದ ಮಗು ಮೃತ್ಯು

Prasthutha|

ಬೆಂಗಳೂರು: ಕಟ್ಟಡದ ಮೇಲಿಂದ ಬಿದ್ದು ಮಗುವೊಂದು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಆಝಾದ್ ನಗರದ 6ನೇ ಕ್ರಾಸ್’ನಲ್ಲಿ ನಡೆದಿದೆ.

- Advertisement -


ಒಂದೂವರೆ ವರ್ಷದ ದೀಕ್ಷಾ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿದ ಮಗು. ವಿನಯ್ ಎಂಬವರ ಪುತ್ರಿ ದೀಕ್ಷಾ, ಸ್ನೇಹಿತರ ಮನೆಗೆ ಬಂದಿದ್ದ ವೇಳೆ ಅವಘಡ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದೆ. ರಾತ್ರಿ 9 ಗಂಟೆ ಸುಮಾರಿಗೆ ಊಟ ಮಾಡಿಸುತ್ತಿದ್ದ ದೀಕ್ಷಾ ತಾಯಿ. ಆ ವೇಳೆ ಆಟವಾಡುತ್ತ ಗ್ರಿಲ್ಸ್ ಮೇಲೆ ಮಗು ಹತ್ತಿದೆ.

ಬಳಿಕ ನೋಡ ನೋಡುತ್ತಿದ್ದಂತೆ ಮಗು ಜಾರಿ ಕೆಳಗೆ ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಗು ಕೊನೆಯುಸಿರೆಳೆದಿದೆ. ಚಾಮರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.



Join Whatsapp