ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಓರ್ವನನ್ನು ಅರೆಸ್ಟ್ ಮಾಡಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಿಳಿಸಿದೆ.
ಮುಝಮ್ಮಿಲ್ ಶರೀಫ್ ಸಹ ಸಂಚುಕೋರನಾಗಿದ್ದು, ಈತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಐಇಡಿ ಸ್ಫೋಟದ ಇತರ ಇಬ್ಬರು ಆರೋಪಿಗಳಿಗೆ ಶರೀಫ್ ಲಾಜಿಸ್ಟಿಕ್ ಬೆಂಬಲವನ್ನು ನೀಡಿದ್ದಾನೆ ಎಂದು ಹೇಳಲಾಗಿದೆ.