ಮಂಗಳೂರು | ಗುದನಾಳದಲ್ಲಿ ಚಿನ್ನ ಅಡಗಿಸಿಟ್ಟು ಸಾಗಾಟಕ್ಕೆ ಯತ್ನ : ಓರ್ವನ ಬಂಧನ

Prasthutha: July 2, 2021

ಮಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನವನ್ನು ಗುದನಾಳದಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರಿನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.


ದುಬೈನಿಂದ ಆಗಮಿಸಿದ ಕೇರಳದ ಕಾಸರಗೋಡಿನ ಮೊಹಿದಿನ್ ಮುನಾಸಿರ್ ಪದಿನಾರ್ ಮೊಹಮದ್ ಎಂಬಾತ ತನ್ನ ಗುದನಾಳದಲ್ಲಿ ಚಿನ್ನ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲಿಸುತ್ತಿದ್ದಾಗ ಗುದನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಈತನಿಂದ 20.89 ಲಕ್ಷ ರೂಪಾಯಿ ಮೌಲ್ಯದ 430 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ವಿಚಾರಣೆ ಮುಂದುವರೆದಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ