ಚಂದ್ರಾಪುರ: ದೇವಸ್ಥಾನದ ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿ, 80 ಮಂದಿ ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದಿದೆ.
ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನ ಕಾಳಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಲೆ 400ಕ್ಕೂ ಅಧಿಕ ಮಂದಿ ಪ್ರಸಾದ ಸೇವಿಸಿದ್ದರು.
ಮೃತ ವ್ಯಕ್ತಿಯನ್ನು ಗುರುಫೆನ್ ಯಾದವ್ ಎಂದು ಗುರುತಿಸಲಾಗಿದ್ದು ಅವರಿಗೆ ಇತರೆ ಆರೋಗ್ಯ ಸಮಸ್ಯೆಗಳಿದ್ದವು ಎಂದು ವೈದ್ಯರು ಹೇಳಿದ್ದಾರೆ. 24 ಮಂದಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಪ್ರಸಾದದಲ್ಲಿ ವಿಷಯಕಾರಿ ಅಂಶ ಏನಿತ್ತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ಆರಂಭಿಸಿದ್ದಾರೆ.