ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ: ಓರ್ವ ಸಾವು, 9 ಮಂದಿಗೆ ಗಾಯ

Prasthutha|

ಹೈದರಾಬಾದ್: ಚಾರ್ಜ್ ನಲ್ಲಿ ಇರಿಸಲಾಗಿದ್ದ ಎಲೆಕ್ಟ್ರಿಕ್ ಸ್ಕೂಟರ್ ಡಿಟ್ಯಾಚೇಬಲ್ ಬ್ಯಾಟರಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ 80 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, 9  ಮಂದಿ ಗಾಯಗೊಂಡ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

80 ವರ್ಷದ ರಾಮಸ್ವಾಮಿ ಎಂಬ ವ್ಯಕ್ತಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ.

ಪ್ರಕಾಶ್ ಅವರು ಕಳೆದೊಂದು ವರ್ಷಗಳಿಂದ ಎಲೆಕ್ಟ್ರಿಕ್ ಸ್ಕೂಟರ್ ಬಳಸುತ್ತಿದ್ದರು. ತಯಾರಕರ ವಿರುದ್ಧ ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.

Join Whatsapp