Home ಟಾಪ್ ಸುದ್ದಿಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ: ಶಿವಮೊಗ್ಗದಲ್ಲಿ ಓರ್ವ ಸಾವು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ: ಶಿವಮೊಗ್ಗದಲ್ಲಿ ಓರ್ವ ಸಾವು

ಶಿವಮೊಗ್ಗ: ರಾಜ್ಯಾದ್ಯಂತ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಮರ ಬಿದ್ದು ಜಯಂತ್ ಭಟ್(64) ಎಂಬುವವರು ಸಾವನ್ನಪ್ಪಿದ್ದಾರೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Join Whatsapp
Exit mobile version