ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ: ಓರ್ವ ಸಾವು 10ಕ್ಕೂ ಹೆಚ್ಚು ಮಂದಿಗೆ ಗಾಯ

Prasthutha|

ಬಳ್ಳಾರಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.

- Advertisement -

ಕೃಷ್ಟಪ್ಪ(62) ಮೃತರು. ಘಟನೆಯಲ್ಲಿ 10 ಜನಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಟ್ರಾಕ್ಸಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

Join Whatsapp