ಮಂಗಳೂರು: ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಾಯ

Prasthutha|

ಮಂಗಳೂರು: ಕಾರು ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ರಾ.ಹೆ.75ರ ಅಡ್ಯಾರ್ ಕಣ್ಣೂರು ಬಳಿ ಸಂಭವಿಸಿದೆ.

- Advertisement -

ಕುಂಜತ್ತೂರು ನಿವಾಸಿ ಇಬ್ರಾಹೀಂ (32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು‌ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ಕಾರಿನಲ್ಲಿ ಕುಂಜತ್ತೂರಿನಿಂದ ಬಂಟ್ವಾಳ ರಸ್ತೆಯಾಗಿ ತೆರಳುತ್ತಿದ್ದರು.ಈ ವೇಳೆ ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಕಾರು ಡಿವೈಡರ್ ದಾಟಿ‌ದಾಗ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.

- Advertisement -

ಈ ಬಗ್ಗೆ ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp