ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಿಂದ ಒಂದು ಲಕ್ಷ ಕೇಸರಿ ಶಾಲು, ಪೇಟ ರವಾನೆ: ಎಂ. ಲಕ್ಷ್ಮಣ್

Prasthutha|

ಮೈಸೂರು: ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಬಿಜೆಪಿಯ ಕೈವಾಡ ಇದೆ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಿಂದ ಒಂದು ಲಕ್ಷ ಕೇಸರಿ ಶಾಲು, ಪೇಟ ರವಾನೆ ಆಗಿದೆ. ಇದನ್ನು ಆರ್ಡರ್ ಮಾಡಿದ್ದು ಯಾರು? ಈ ಸಂಬಂಧ ಮೂರು ದಿನಗಳಲ್ಲಿ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ತಿಳಿಸಿದ್ದಾರೆ.

- Advertisement -

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಜಾಬ್ ವಿವಾದ, ಬಿಜೆಪಿ ಪ್ರಾಯೋಜಿತ ಕಾರ್ಯಕ್ರಮ. ಕಾಂಗ್ರೆಸ್ ಗೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹಿಜಾಬ್ ವಿವಾದ ಸೃಷ್ಟಿಸಿ ದೇಶವೇ ತಲೆ ತಗ್ಗಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೋಮುವಾದದ ವಿಷ ಬಿತ್ತುತ್ತಿದೆ. ಇವರಿಗೆ ಅಧಿಕಾರವೇ ಮುಖ್ಯವಾಗಿದೆ. 9, 10 ನೇ ತರಗತಿಯ ಮಕ್ಕಳಲ್ಲಿ ಕೋಮುವಾದ ಹಬ್ಬಿಸುತ್ತಿದ್ದಾರೆ. ನಿಮಗೆ ನಾಚಿಕೆ ಅಗೋದಿಲ್ಲವಾ..? ಎಂದು ಖಾರವಾಗಿ ಪ್ರಶ್ನಿಸಿದರು.

- Advertisement -

ಹಿಜಾಬ್ ಸಂಸ್ಕೃತಿ ಕೇವಲ ಮುಸ್ಲಿಂರಿಗೆ ಮಾತ್ರ ಇಲ್ಲ. ನಮ್ಮ ಹೆಣ್ಣುಮಕ್ಕಳು ಸೆರಗನ್ನು ಹಾಕಿಕೊಳ್ಳುವ ಪದ್ದತಿ ಹಿಂದೂ ಸಮುದಾಯದಲ್ಲೂ ಇದೆ. ನಾರಾಯಣ ಗುರು ಸ್ತಬ್ಧಚಿತ್ರದ ವಿಚಾರ ಮುಚ್ಚಿ ಹಾಕಲು ಈ ವಿವಾದ ಸೃಷ್ಟಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.



Join Whatsapp